ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಸರಣಿ ಅಪಘಾತ!; ಓರ್ವ ಮಹಿಳೆ ಸಾವು| Mumbai-Pune Expressway

Untitled design (18) (1)
Published on

Mumbai-Pune Expressway: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಶನಿವಾರ (ಜುಲೈ 26) ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ, ಓರ್ವ ಮಹಿಳೆ ಸಾವನಪ್ಪಿದ್ದು, ಉಳಿದ 19 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ರಾಯಗಢ ಜಿಲ್ಲೆಯ ಖೋಪೋಲಿ ಬಳಿಯ ಎಕ್ಸ್‌ಪ್ರೆಸ್‌ ವೇನಲ್ಲಿ ಈ ಘಟನೆ ನಡೆದಿದೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ಇಳಿಜಾರಿನಲ್ಲಿ ಇಳಿಯುವಾಗ ಟ್ರಕ್​ನ ಬ್ರೇಕ್ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಮುಂದೆ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು 20 ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಅಪಘಾತದಲ್ಲಿ 19 ಜನರಿಗೆ ಗಾಯವಾಗಿದ್ದು, ಅವರನ್ನೆಲ್ಲಾ ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟ್ರಕ್ ಚಾಲಕನನ್ನು ಈಗಾಗಲೇ ಪೊಲೀಸ್​ರು ಬಂಧಿಸಿದ್ದು, ವಾಹನ ಚಾಲನೆ ಮಾಡುವ ಸಮಯದಲ್ಲಿ ಅವನು ಮದ್ಯ ಸೇವಿಸಿರಲಿಲ್ಲ ಎನ್ನುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net