ನಿಂತಿದ್ದ ಕಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಟ್ರಕ್; ಸಾವನ್ನಪ್ಪಿದ ಪೊಲೀಸ್​ ಅಧಿಕಾರಿ!

Untitled design - 2023-07-30T201929.708
Published on

ನವದೆಹಲಿ: ದೆಹಲಿಯ ರೋಹ್ಟಕ್ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಮ್ಮ ಕಾರು ರಸ್ತೆಯ ಮಧ್ಯೆ ಕೆಟ್ಟು ನಿಂತ ಕಾರಣ, ಪೊಲೀಸ್​ ಅಧಿಕಾರಿಯೊಬ್ಬರು ಅದನ್ನು ರಿಪೇರಿ ಮಾಡಿಸಲು ಸ್ಥಳದಲ್ಲೇ ನಿಲ್ಲಿಸಿದ್ದರು. ಈ ವೇಳೆ ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಂದ ಟ್ರಕ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇನ್ಸ್‌ಪೆಕ್ಟರ್ ಮೃತಪಟ್ಟಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ದೆಹಲಿಯ ಮಾದಿಪುರ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದೆ. ಅಪಘಾತ ನಡೆದ ತಕ್ಷಣ ಚಾಲಕ ತನ್ನ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ವಿಚಾರಣೆ ಆರಂಭಿಸಿದ್ದು, ಚಾಲಕನ ಪತ್ತೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net