ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಸರ್ಕಾರಿ ನೌಕರರ ಸೌಹಾರ್ದ ಸಹಕಾರ ಸಂದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಸಹಕಾರ ತತ್ವದಡಿ ಕೆಲಸ ಮಾಡುವಾಗ ಹೆಚ್ಚು ಜಾಗ್ರತೆಯಿಂದ ಇರಬೇಕು. ಸರ್ಕಾರಿ ನೌಕರರಿಗೆ ಸೀಮಿತವಾದ ರಾಜ್ಯದ ಎರಡನೇ ಸಹಕಾರ ಸೌಹಾರ್ದ ಇದಾಗಿದೆ. ಸಂಸ್ಥೆ ಪ್ರಾರಂಭವಾಗಿ 12 ವರ್ಷ ಆಗಿದ್ದು, ನೌಕರರಿಗೆ ಆರ್ಥಿಕ ಬೆನ್ನೆಲುಬಾಗಿ ಸ್ಪಂದಿಸುತ್ತಿರುವುದು ಗಮನಾರ್ಹ ಸಂಗತಿ. ಷೇರುದಾರಸ್ನೇಹಿ ಯೋಜನೆಗಳನ್ನು ಜಾರಿಗೆ ತಂದಾಗ ಹೆಚ್ಚು ಜನರನ್ನು ಆಕರ್ಷಿಸಲು ಸಾಧ್ಯ ಎಂದು ತಿಳಿಸಿದರು.