ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಿಗೆ ಅ.3ಕ್ಕೆ ಅಭಿನಂದನೆ

Tsr, Mohare
Published on

ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ದಿನಾಂಕ 3.10.2024 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಚಂದ್ರಶೇಖರ್ ಪಾಲೆತ್ತಾಡಿ, ಶಿವಲಿಂಗಪ್ಪ ದೊಡ್ಡಮನಿ ಅವರನ್ನು ಗೌರವಿಸಲಾಗುವುದು.
ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ ಅವರು ಭಾಗವಹಿಸಲಿದ್ದಾರೆ ಎಂದು ಕೆಯುಡಬ್ಲೃಜೆ ಪ್ರಧಾನ ಕಾರ್ಯದರ್ಶಿ ಜಿ.ವಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net