ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸಾವು‌, ನಾಲ್ವರ ಸ್ಥಿತಿ ಗಂಭೀರ

tmk accident
Published on

ತುಮಕೂರು: ನಿಂತಿದ್ದ ಬಸ್ ಗೆ ಟೆಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ.ಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ವಾಸಿ (ಟಿಟಿ ವಾಹನದ ಚಾಲಕ) ವೀರೇಶ್ (30), ಹಾಗೂ ಶಶಿಕಲಾ( 69) ಮೃತ ದುರ್ದೈವಿಗಳು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತಿಕ್ಷಾ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ ಗ್ರಾಮದ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ಡಿಕ್ಕಿ ಹೊಡೆದಿದ್ದು ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಮೃತಪಟ್ಟಿದ್ದಾರೆ. ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net