ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

eediga
ಡಾ. ಆರ್.ಶ್ರೀಧರ್ ಹುಲ್ತಿಕೊಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಮಪ್ಪ ಕಾಗೋಡು, ಭುಜಂಗಯ್ಯ, ರಾಜಪ್ಪ, ಉದಯಕುಮಾರ್, ಪ್ರೊ.ಕಲ್ಲನ ಮುಂತಾದವರಿದ್ದರು.
Published on

ಶಿವಮೊಗ್ಗ: ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಜಿಲ್ಲಾಡಳಿತದಿಂದ ಆ.20ರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ಆರ್.ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಯಂತಿ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಭಾಗವಹಿಸಲಿದ್ದಾರೆ ಎಂದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನಿಗಮ-ಮಂಡಳಿಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ನಮ್ಮ ಸಂಘದ ಪದಾಧಿಕಾರಿಗಳು, ಈಡಿಗ ಸಮುದಾಯದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಕೆ.ವಿ.ಜ್ಯೋತಿಕುಮಾರಿ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಆರ್ಯ ಈಡಿಗ ಸಮಾಜದ ಪ್ರಮುಖರಾದ ಭುಜಂಗಯ್ಯ, ರಾಮಪ್ಪ ಕಾಗೋಡು, ಕೃಷ್ಣಮೂರ್ತಿ, ರಾಜಪ್ಪ, ಪ್ರೊ. ಕಲ್ಲನ, ಎಸ್.ಟಿ.ನಾಯಕ್ ಹುಲ್ತಿಕೊಪ್ಪ, ಡಿ.ಎ.ಕೃಷ್ಣಮೂರ್ತಿ, ಕೆ.ವೈ.ರಾಮಚಂದ್ರ, ಉದಯಕುಮಾರ್, ಹೆಳ್ಳೋಡಿ ಕೃಷ್ಣಮೂರ್ತಿ, ರಾಜಪ್ಪ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net