

Tuition Teacher Arrested: 17 ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪದಡಿ ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಟ್ಯೂಷನ್ ಶಿಕ್ಷಕನನ್ನು ಬಂಧಿಸಿರುವ ಘಟನೆ ಮಂಗಳವಾರ (ಸೆಪ್ಟೆಂಬರ್ 23) ಬೆಳಕಿಗೆ ಬಂದಿದೆ.
ನಿರಂತರ ಅತ್ಯಾಚಾರ ಎಸಗಿದ ಹಿನ್ನೆಲೆ ಗರ್ಭ ಧರಿಸದ್ದ ಸಂತ್ರಸ್ತೆಯನ್ನು ಆರೋಪಿ ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಆದರೆ, ಈ ವೇಳೆ ವಿದ್ಯಾರ್ಥಿನಿ ಮೃತಪಟ್ಟಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿಯು ಪ್ರಥಮ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಟ್ಯೂಷನ್ಗೆ ಹೋಗುತ್ತಿದ್ದಳು. ಇಲ್ಲಿ ವಿದ್ಯಾರ್ಥಿಯೊಂದಿಗೆ ಸ್ನೇಹ ಬೆಳಸಿಕೊಂಡಿದ್ದ ಶಿಕ್ಷಕ ಆಕೆಗೆ 9 ತಿಂಗಳಿನಿಂದ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆ ಗರ್ಭಿಣಿಯಾಗಿದ್ದು, ಆರೋಪಿ ಆಕೆಯನ್ನು ಪುಸಾದ್ ಪಟ್ಟಣಕ್ಕೆ ಕರೆದೊಯ್ದು ಗರ್ಭಪಾತಕ್ಕೆ ಮಾತ್ರೆ ನೀಡಿದ್ದಾನೆ. ಆದರೆ, ಈ ಮಾತ್ರೆ ಸೇವನೆ ಮಾಡಿದರಿಂದ ಆಕೆ ಸ್ಥಿತಿ ಹದಗೆಟ್ಟಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಪೊಲೀಸರು ಆತನನ್ನು ಬಂಧಿಸಿದ್ದು, ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)