ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ

tumakuru-1 jan02 2020
Published on

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಡಾ. ಶಿವಕುಮಾರ ಶ್ರೀಗಳ ಗದ್ದುಗೆಯನ್ನು ವಿಶೇಷ ಅಲಂಕಾರ ಮಾಡಲಾಗಿದೆ.


ಶ್ರೀಗಳ ಗದ್ದುಗೆ ಮೇಲೆ ತ್ರಿವರ್ಣ ಧ್ವಜವುಳ್ಳ ಭಾರತ ಭೂಪಟದ ಹೂವಿನ ಅಲಂಕಾರ ಮಾಡಲಾಗಿದೆ. ಗದ್ದುಗೆ ಮುಂಭಾಗವನ್ನು ಕೂಡ ಹೂವಿನಿಂದ ಅಲಂಕರಿಸಲಾಗಿದೆ.


ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ಶಿವಕುಮಾರ ಶ್ರೀಗಳ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕುವರು.


ನಂತರ ಮಠದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಠದಲ್ಲಿ 45 ನಿಮಿಷ ಕಾಲ ಕಳೆಯಲಿದ್ದಾರೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net