ತುಂಗಭದ್ರಾ ನದಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ವಶ

31-RNR-04
Published on

ರಾಣೆಬೆನ್ನೂರ: ತುಂಗಭದ್ರಾ ನದಿಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 83 ಮೆಟ್ರಿಕ್ ಟನ್ ಮರಳನ್ನು ಕಂದಾಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ತಾಲೂಕಿನ ಕೋಟಿಹಾಳ ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ.
ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಕೆಲವರು ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಸೀಲ್ದಾರ್ ಎಚ್.ಎನ್. ಶಿರಹಟ್ಟಿ ಮರಳು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net