ಲೋಕಾಯುಕ್ತ ದಾಳಿ | ಬಾಗಲಕೋಟೆ ಕೃಷಿ ನಿರ್ದೇಶಕಿ ಮನೆಯಲ್ಲಿ ಆಮೆ ಪತ್ತೆ!

agri directoe
Published on

ಬಾಗಲಕೋಟೆ: ಕೃಷಿ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬಾಗಲಕೋಟೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿ.ಎಸ್ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ.

ವಿದ್ಯಾಗಿರಿಯ ಅಕ್ಕಿಮರಡಿ ಲೇಔಟನಲ್ಲಿರುವ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಮನೆ ಮೇಲೆ ದಾಳಿ ನಡೆದಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅದಲ್ಲದೇ ಬೀಳಗಿ ಭಾಗದ ಸಹಾಯಕ ಕೃಷಿ ನಿರ್ದೇಶಕ ಕೃಷ್ಣಾ ಶಿರೂರು ಮನೆ ಮೇಲೂ ದಾಳಿ ನಡೆದಿದೆ. ಇವರ ಮನೆ ವಿದ್ಯಾಗಿರಿಯ 18ನೇಕ್ರಾಸ್ ನಲ್ಲಿದ್ದು ಅಲ್ಲಿಯೂ ಲೋಕಾ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೃಷಿ ನಿರ್ದೇಶಕಿ ಮನೆಯಲ್ಲಿ ಆಮೆ ಪತ್ತೆ!

ಬಾಗಲಕೋಟೆ ಕೃಷಿ ಇಲಾಖೆಯ ಜೆ.ಡಿ ಚೇತನಾ ಪಾಟೀಲ ಮನೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ಈ ಸಂದರ್ಭ ಅವರ ಮನೆಯಲ್ಲಿ ಎರಡು ಆಮೆಗಳು ಪತ್ತೆಯಾಗಿವೆ.

ಚೇತನಾ ಪಾಟೀಲ್ ಮನೆಯಲ್ಲಿ ಎರಡು ಸಾಕು ಆಮೆಗಳು ಪತ್ತೆಯಾಗಿದ್ದು ಆಮೆಗಳನ್ನು ಸಾಕಿದ್ದೇಕೆ ಎನ್ನುವ ಕುತೂಹಲವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಇದೀಗ ಲ್ಯಾಪ್ ಟಾಪ್ ನಲ್ಲಿರುವ ದಾಖಲಾತಿ ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಸಂಗ್ರಹಿಸುತ್ತಿದ್ದು ಹೆಚ್ಚಿನ ಪರಿಶೀಲನೆ ನಡೆಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯ ಅಕ್ಕಿಮರಡಿ ಲೆಔಟಿನಲ್ಲಿರುವ ಮನೆಯಲ್ಲಿ ಚೇತನಾ ಪಾಟೀಲ ವಾಸವಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net