ಮೇಲುಸೇತುವೆ, ಕೆಳಸೇತುವೆ ನಿರ್ವಹಣೆ ನಿಭಾಯಿಸಲು ತುಷಾರ್ ಗಿರಿನಾಥ್ ಸೂಚನೆ

flyover
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ವಿವಿಧ ವಿಷಯಗಳಿಗೆ ಸಂಬಂಧಿಸಿ ಮಂಗಳವಾರ ವಿಡಿಯೋ ಸಂವಾದದ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪಾಲಿಕೆ ಒಡೆತನದಲ್ಲಿರುವ ಎಲ್ಲ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಪರಿಶೀಲನೆ ನಡೆಸಿ ಸರಿಯಾಗಿ ನಿರ್ವಹಣೆ ಮಾಡಬೇಕು. ಸ್ಕೈವಾಕ್‌ಗಳಲ್ಲಿ ಬರುವ ಲಿಫ್ಟ್​​​​ಗಳನ್ನು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಎಲ್ಲ ಸ್ಕೈವಾಕ್‌ಗಳ ಬಳಿ ಸ್ವಚ್ಛತೆ ಕಾಪಾಡಿ ಪಾದಚಾರಿಗಳ ಓಡಾಟಕ್ಕೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಆಸ್ತಿತೆರಿಗೆ ಸಂಗ್ರಹಕ್ಕೆ ಒತ್ತು ನೀಡಿ:

ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಂದ ಆಸ್ತಿತೆರಿಗೆ ಸಂಗ್ರಹಿಸಬೇಕು. ನವೆಂಬರ್ ತಿಂಗಳಾಂತ್ಯದವರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತಿರಿಸಿದ್ದು, ಬಾಕಿ ಆಸ್ತಿತೆರಿಗೆ ಪಾವತಿಸಬೇಕಿರುವವರಿಂದ ಕೂಡಲೆ ಬಾಕಿ ತೆರಿಗೆಯನ್ನು ಪಾವಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಬೀದಿ ದೀಪಗಳ ನಿರ್ವಹಣೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆಗಳು, ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮುಖ್ಯ ಆಯುಕ್ತರು ಸೂಚಿಸಿದರು.

ಸಭೆಯಲ್ಲಿ ಪಾಲಿಕೆಯ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ.ಹರೀಶ್ ಕುಮಾರ್, ಎಲ್ಲ ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net