Crime Patrol ಖ್ಯಾತಿಯ ನಟ Nitin Chauhan ಆತ್ಮಹತ್ಯೆ; ಸಾವಿನ ಸುತ್ತ ಅನುಮಾನಗಳ ಹುತ್ತ!

Nitin Chauhaan
Published on

ಮುಂಬೈ: ಹಿಂದಿ ಕಿರುತೆರೆಯಲ್ಲಿ ಸಾಕಷ್ಟು ಜನಮನ್ನಣೆ ಪಡೆದಿರುವ ಕ್ರೈಂ ಪ್ಯಾಟ್ರೋಲ್​ (Crime Patrol) ಧಾರಾವಾಹಿ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದ ನಟ ನಿತಿನ್ ಚೌಹಾಣ್ (Nitin Chauhan) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ (Nitin Chauhan) 35 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ನಿತಿನ್​ ಅವರ ಸಾವಿನ ಸುದ್ದಿಯನ್ನು ಅವರ ಸ್ನೇಹಿತರು, ಕುಟುಂಬದವರು ಖಚಿತಪಡಿಸಿದ್ದಾರೆ.ನಿತಿನ್​ ಸಾವಿನ ಸುತ್ತ ಅನುಮಾನದ ಹುತ್ತ ನಿರ್ಮಾಣವಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಗುರುವಾರ (ನವೆಂಬರ್​ 07) ಮುಂಬೈನ ಅಪಾರ್ಟ್​ಮೆಂಟ್​ ಒಂದರಲ್ಲಿ ನಿತಿನ್​ (Nitin Chauhan) ಅವರು ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಿತಿನ್​ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಆಲಿಘಡ ಮೂಲದ ನಿತಿನ್ (Nitin Chauhan), ಹಿಂದಿಯ ದಾದಾಗಿರಿ–2 ರಿಯಾಲಿಟಿ ಶೋ ವಿಜೇತರಾಗಿದ್ದರು. ಇದಲ್ಲದೇ ಅನೇಕ ರಿಯಾಲಿಟಿ ಶೋ, ಕ್ರೈಂ ಪ್ಯಾಟ್ರೋಲ್ (Crime Patrol) ಸೇರಿದಂತೆ ಹಿಂದಿ ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.

https://www.vijayavani.net/this-land-belongs-to-nizams-controversial-statement-of-a-muslim-woman-in-owaisis-election-rally-in-maharashtra

https://www.vijayavani.net/wpl-2025-retentions-complete-list-of-players-retained-and-released-by-all-5-womens-premier-league-franchises

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net