

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೊರಡಿಸಿದ ಹಲವಾರು ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ, ನ್ಯಾಯಾಲಯ ಮೆಟ್ಟಲೇರಿದ್ದ ಟ್ವಿಟರ್ ಕಂಪನಿಗೆ ಕರ್ನಾಟಕ ಹೈಕೋರ್ಟ್ 50 ಲಕ್ಷ ರೂ. ದಂಡವನ್ನು ವಿಧಿಸಿದೆ.
ಈ ದಂಡವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ಒಂದು ವೇಳೆ ಪಾವತಿ ವಿಳಂಬವಾದರೆ ಪ್ರತಿದಿನ ಹೆಚ್ಚುವರಿಯಾಗಿ 5000ರೂ. ಪಾವತಿಸಬೇಕು. ಸಾಮಾಜಿಕ ಜಾಲತಾಣವಾದ ಟ್ವಿಟರ್, ಸರ್ಕಾರದ ಆದೇಶಗಳನ್ನು ಅನುಸರಿಸದೆ ನ್ಯಾಯಾಲಯವನ್ನು ಸಂಪರ್ಕಿಸಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಇದನ್ನೂ ಓದಿ: ಕೃಷಿ ಇಲಾಖೆ ಜೆಡಿ ಡಾ. ಚೇತನಾ ಪಾಟೀಲ ಮೇಲೆ ಲೋಕಾ ದಾಳಿ ಪ್ರಕರಣ; ಬಗೆದಷ್ಟೂ ಸಿಗುತ್ತಿದೆ ಚಿನ್ನ, ಬೆಳ್ಳಿ ಹಣ!
ಟ್ವಿಟರ್ ವಿದೇಶಿ ಕಂಪನಿಯಾಗಿ ಭಾರತದ ಸಂವಿಧಾನದ 19 ಮತ್ತು 21 ನೇ ವಿಧಿಯ ಅಡಿಯಲ್ಲಿ ಭಾರತದ ನಾಗರಿಕರಿಗೆ ಖಾತರಿಪಡಿಸಿದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ. ಟ್ವೀಟ್‌ಗಳನ್ನು ನಿರ್ಬಂಧಿಸಲು ಮತ್ತು ಖಾತೆಗಳನ್ನು ನಿರ್ಬಂಧಿಸಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ನ್ಯಾಯಾಲಯ ತಿಳಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಫೆಬ್ರವರಿ 2021 ಮತ್ತು ಫೆಬ್ರವರಿ 2022ರ ನಡುವೆ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸಲು ಟ್ವಿಟರ್‌ಗೆ ನಿರ್ದೇಶನ ನೀಡಿತ್ತು. ಇವುಗಳಲ್ಲಿ, ಕೆಲವು ಖಾತೆಗಳು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿವೆ ಇವುಗಳನ್ನು ಮುಟ್ಟುಗೋಲು ಹಾಕಿ, ಟ್ವೀಟ್ ಅಳಿಸಿ ಹಾಕುವಂತೆ ಕೇಂದ್ರವು ಟ್ವಿಟರ್‌ಗೆ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಟ್ವಿಟರ್ ಕೋರ್ಟ್ ಮೆಟ್ಟಿಲೇರಿತ್ತು.(ಏಜೆನ್ಸೀಸ್)