ಮೋಸ್ಟ್ ವಾಂಟೆಡ್ 'ಬಿಷ್ಣೋಯ್ ಗ್ಯಾಂಗ್'​ನ ಇಬ್ಬರು ಕಾರ್ಯಕರ್ತರ ಬಂಧನ| arrest

Arrest
Published on

ಚಂಡೀಗಢ: ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಹರಿಯಾಣದ ಗಡಿಯಲ್ಲಿರುವ ಶಂಭು ಗ್ರಾಮದ ಬಳಿ ಇಬ್ಬರು ಮೋಸ್ಟ್ ವಾಂಟೆಡ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕಾರ್ಯಕರ್ತರನ್ನು ಬಂಧಿಸಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.

ಬಂಧಿತರಿಂದ 9 ಎಂಎಂ ಗ್ಲಾಕ್ ಪಿಸ್ತೂಲ್ ಹಾಗೂ 6 ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರೂ ಸಹ ಅಪರಾಧ ಹಿನ್ನೆಲೆ ಹೊಂದಿದ್ದು, ಪಂಜಾಬ್, ದೆಹಲಿ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಅವರ ವಿರುದ್ಧ 15 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಕೊಲೆ ಮಾಡಿದ ಬಳಿಕ ಅವರು ನೇಪಾಳಕ್ಕೆ ಪರಾರಿಯಾಗಿದ್ದಾರೆ ಮತ್ತು ವಿದೇಶಿ ಮೂಲದ ವ್ಯಕ್ತಿಯ ಮೇರೆಗೆ ರಾಜ್ಯದಲ್ಲಿ ಸಂಚಲನ ಮೂಡಿಸುವ ಅಪರಾಧವನ್ನು ಎಸಗಲು ಹಿಂತಿರುಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ. ಫಜಿಲ್ಕಾದಲ್ಲಿ ಇತ್ತೀಚೆಗೆ ನಡೆದ ಭರತ್ ರತನ್ ಅಲಿಯಾಸ್ ವಿಕ್ಕಿಯ ಕೊಲೆಯಲ್ಲೂ ಇವರ ಕೈವಾಡವಿರಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net