ಅಪಘಾತದಲ್ಲಿ ಇಬ್ಬರು ಗಂಭೀರ

Accident
Published on

ಸುಂಟಿಕೊಪ್ಪ: ಮಡಿಕೇರಿ ಕುಶಾಲನಗರ ಮುಖ್ಯ ರಸ್ತೆಯ ಸುಂಟಿಕೊಪ್ಪ ಬಳಿ ಬಾಳೆಕಾಡು ರಸ್ತೆ ತಿರುವಿನಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಚಾಲಕ ರಂಜೀತ್ ಹಾಗೂ ಸಹ ಪ್ರಯಾಣಿಕ ಕುಮಾರ ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಬ್ಬಸಕ್ಕೆ ಕಾರು ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ತೆರಳಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ವೇಳೆ ರಸ್ತೆಯಲ್ಲಿ ಉಂಟಾಗಿದ್ದ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net