ಪಾಕ್ ಪರ ಗೂಢಚಾರಿಕೆ, ಇಬ್ಬರ ಬಂಧನ

4-6820e2beefae9
Published on

ಚಂಡೀಗಢ: ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್ ಕಚೇರಿಯ ಅಧಿಕಾರಿಯೊಬ್ಬರು ನಡೆಸುತ್ತಿದ್ದ ಬೇಹುಗಾರಿಕೆ ಚಟುವಟಿಕೆಗಳಿಗೆ ನೆರವಾದ ಆರೋಪದ ಮೇಲೆ ಪಂಜಾಬ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಾಕ್ ಮೂಲದ ಹ್ಯಾಂಡ್ಲರ್​ಗೆ ಭಾರತೀಯ ಸೇನೆಯ ಚಲನವಲನಗಳ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡುತ್ತಿದ್ದ ಅನುಮಾನದ ಮೇಲೆ ಒಬ್ಬನನ್ನು ಸೆರೆಹಿಡಿದರೆಂದು ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ತಿಳಿಸಿದ್ದಾರೆ.

ಬಂಧಿತನ ವಿಚಾರಣೆ ವೇಳೆ ಸಿಕ್ಕ ಸುಳಿವಿನ ಆಧಾರದಲ್ಲಿ ಎರಡನೇ ವ್ಯಕ್ತಿಯನ್ನೂ ಬಂಧಿಸಲಾಯಿತೆಂದು ಅವರು ಹೇಳಿದ್ದಾರೆ. ಗೋಪ್ಯ ಮಾಹಿತಿಗಳನ್ನು ಒದಗಿಸಿದ್ದಕ್ಕೆ ಪ್ರತಿಯಾಗಿ ಆರೋಪಿಗಳು ಆನ್​ಲೈನ್ ವ್ಯವಹಾರಗಳ ಮೂಲಕ ಹಣವನ್ನು ಪಡೆಯುತ್ತಿದ್ದುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು ಎಫ್​ಐಆರ್ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net