ಇಬ್ಬರು ಬೈಕ್ ಕಳ್ಳರ ಸೆರೆ

Arrest Kaidhi
Published on

ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್‌ನ ಗೋವಿಂದರಾಜು (49) ಮತ್ತು ನಂದಿನಿ ಲೇಔಟ್‌ನ ಪ್ರಭು (29) ಬಂಧಿತರು. 6.50 ಲಕ್ಷ ರೂ. ಮೌಲ್ಯದ 21 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಸೆ.22ರಂದು ಮಹಾಲಕ್ಷ್ಮೀ ಲೇಔಟ್‌ನ 15ನೇ ಮುಖ್ಯರಸ್ತೆಯಲ್ಲಿ ವಾಹನ ಕಳ್ಳತನವಾಗಿತ್ತು.

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗೊರಗುಂಟೆಪಾಳ್ಯದ ತಾಜ್ ಹೋಟೆಲ್ ಬಳಿ ಗೋವಿಂದರಾಜುನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net