ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ

13M.D.R.4
ಅಪಘಾತದಲ್ಲಿ ಕಾರು ಜಖಂಗೊಂಡಿರುವುದು.
Published on

ಮದ್ದೂರು: ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಭಾನುವಾರ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಕಾಲು ಮುರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.


ಬೆಂಗಳೂರಿನ ಫಣೀಂದ್ರ ಹಾಗೂ ಚನ್ನಪಟ್ಟಣ ಮೂಲದ ನಾಗೇಶ್ ಗೌಡ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರರು. ಇಬ್ಬರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಭಾನುವಾರ ಬೆಳಗ್ಗೆ ಸುಮಾರು 7.30ರಲ್ಲಿ ಪಟ್ಟಣದ ಕೋಡಿಹಳ್ಳಿ ಸಮೀಪ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅಂಡರ್ ಪಾಸ್‌ನಿಂದ ಮತ್ತೊಂದು ಬದಿಯ ಸರ್ವೀಸ್ ರಸ್ತೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net