ಈಜು ಬಾರದಿದ್ದರೂ ಬಾವಿಗಿಳಿದ ಇಬ್ಬರು ಬಾಲಕರು ನೀರುಪಾಲು; ಓರ್ವನ ಶವ ಪತ್ತೆ, ಇನ್ನೊಬ್ಬನಿಗಾಗಿ ಹುಡುಕಾಟ

Death 2 March 20
Published on

ವಿಜಯಪುರ: ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ.

ಸೈಯದ್​ ಪಟೇಲ್​ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಲೆಂದು ಸನ್ನಾವುಲ್ ಗುಂದಗಿ(17) ಸೋಹೆಲ್(14) ತೆರಳಿದ್ದರು. ಆದರೆ ಇಬ್ಬರೂ ನೀರುಪಾಲಾಗಿದ್ದಾರೆ. ಅವರಲ್ಲಿ ಸನ್ನಾವುಲ್ಲನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸೋಹೆಲ್​ಗಾಗಿ ಹುಡುಕಾಟ ಮುಂದುವರಿದಿದೆ.

ಇವರಿಬ್ಬರಿಗೂ ಈಜಲು ಬರುತ್ತಿರಲಿಲ್ಲ. ಆದರೂ ಧೈರ್ಯ ಮಾಡಿ ಹೋಗಿದ್ದರು ಎನ್ನಲಾಗಿದೆ. ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net