ಆಟವಾಡುತ್ತಿದ್ದಾಗ ಆಯತಪ್ಪಿ ನೀರಿನ ಸಂಪ್​ಗೆ ಬಿದ್ದ ಮಕ್ಕಳು!

ವಿದ್ಯಾರ್ಥಿಗಳಿಬ್ಬರು ಸಾವು
Published on

ಬೆಳಗಾವಿ: ಸವದತ್ತಿ ಪಟ್ಟಣದ ಗುರ್ಲ್ ಹೊಸೂರು ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಬಿದ್ದು ನರ್ಸರಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.

ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರು ನರ್ಸರಿ ಓದುತ್ತಿದ್ದರು. ಮಕ್ಕಳಿಬ್ಬರು ಆಟವಾಡುತ್ತಾ ಹೋಗಿ ಆಯಾ ತಪ್ಪಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದಿದ್ದಾರೆ. ಶ್ಲೋಕ ಶಂಭುಲಿಂಗಪ್ಪ ಗುಡಿ(4) ಹಾಗೂ ಚಿದಾನಂದ ಪ್ರಕಾಶ ಸಾಲುಂಕೆ(4) ಮೃತ ವಿದ್ಯಾರ್ಥಿಗಳು.

ಇಂದು(ಜ.10) ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಬಂದು ಶೋಧ ಕಾರ್ಯ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net