

- ಮೃತ ಮಕ್ಕಳ ಕುಟುಂಬಸ್ಥರಿಗೆ ಶಾಸಕ ಬಾಲಕೃಷ್ಣ ಸಾಂತ್ವಾನ
ರಾಮನಗರ: ಕುಡಿದ ಮತ್ತಿನಲ್ಲಿ ಗೂಡ್ಸ್ ವಾಹನವನ್ನ ಅಡ್ಡಾದಿಡ್ಡಿ ಓಡಿಸಿ ಮಕ್ಕಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಧಾರಣವಾಗಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಗಾಯಗೊಂಡಿರುವ ಕರಣಾಜನಕ ಘಟನೆ ರಾಮನಗರದಲ್ಲಿ ನಡೆದಿದೆ.
ರೋಹಿತ್ (5), ಶಾಲಿನಿ (8) ಇಬ್ಬರು ಸಾವನ್ನಪ್ಪಿದ ಕಂದಮ್ಮಗಳು. ಸುಚಿತ್, ಗೌತಮ್, ಲೇಖನ ಎಂಬ ಮಕ್ಕಳು ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾರೆ. ರಾಮನಗರ ಜಿಲ್ಲೆಯಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಿನ್ನೆ ಸಂಜೆ ಮಕ್ಕಳು ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿದೆ.
ಇತ್ತ ಮಕ್ಕಳನ್ನ ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲುಮುಟ್ಟಿದೆ. ಮಕ್ಕಳನ್ನ ಕಳೆದುಕೊಂಡ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ಇಡೀ ಊರಿಗೆ ಊರೇ ಸೂತಕದ ಛಾಯೆಯಲ್ಲಿ ಮುಳುಗಿದೆ.
ರಾಮನಗರ ಜಿಲ್ಲೆಯಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಿನ್ನೆ ಸಂಜೆ ಮಕ್ಕಳು ಟೂಷನ್ ಮಿಗಿಸಿ ಮನೆಕಡೆ ಮುಖಮಾಡಿದ್ರು. ಆದ್ರೆ ಕುಡಿದ ಮತ್ತಿನಲ್ಲಿ ಅಜಾಗರೂಕತೆ ಚಾಲನೆ ಮಾಡಿ ಯಮರಾಯನಂತ ವಾಹನ ಮಕ್ಕಳೆ ಮೇಲೆ ಬಂದೆರಗಿದೆ. ಇದರಿಂದ ಒಟ್ಟು ಐದು ಜನ ಮಕ್ಕಳು ಗಂಭೀರಾವಾಗಿ ಗಾಯಗೊಂಡ್ರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಹೆಚ್.ಸಿ ಬಾಲಕೃಷ್ಣ ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಿಎಂ ನಿಧಿಯಿಂದ ಪರಿಹಾರ ಕೊಡಿಸುವ ಬರವಸೆ ನೀಡಿದರು. ಅಲ್ಲದೆ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆಯನ್ನು ನೀಡಿದ್ದಾರೆ.