

ರಾಜಸ್ಥಾನ: ರಾಜಸ್ಥಾನದ ಕೋಟಾದಲ್ಲಿ ಭೋಪಾಲ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಘಟನೆ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ರೈಲ್ವೇ ಅಧಿಕಾರಿಗಳ ಪ್ರಕಾರ, ರೈಲು ಸಂಖ್ಯೆ 14813, ಜೋಧ್‌ಪುರ-ಭೋಪಾಲ್ ಎಕ್ಸ್‌ಪ್ರೆಸ್‌ನ ಎರಡು ಕೋಚ್‌ಗಳು ಕೋಟಾ ಜಂಕ್ಷನ್‌ನ ಬಳಿ ಹಳಿತಪ್ಪಿವೆ. ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಹಾರ ಕಾರ್ಯ ಆರಂಭಿಸಿದ್ದಾರೆ. ಕೋಟಾ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM) ಪ್ರಯಾಣಿಕರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, "ಕೋಟಾ ಜಂಕ್ಷನ್ ಬಳಿ ಭೋಪಾಲ್‌ನತ್ತ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನ 2 ಬೋಗಿಗಳು ಹಳಿತಪ್ಪಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ. ಹಿಂದಿನ ಡಿಸೆಂಬರ್ 2023 ರಲ್ಲಿ ಇದೇ ರೀತಿ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಖಾಲಿ ರೈಲು ಹಳಿತಪ್ಪಿತ್ತು.
ವರದಿಯ ಪ್ರಕಾರ, ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ,(ಏಜೆನ್ಸೀಸ್).