

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕೈ ಕಾರ್ಯಕರ್ತರು ಇದೀಗ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲ ವಿರುದ್ಧ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಟೈರ್ಗೆ ಬೆಂಕಿ ಹಚ್ಚಿ, ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಈ ವೇಳೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಇಬ್ಬರು ಕಾರ್ಯಕರ್ತರಿಗೆ ಪ್ರತಿಭಟನೆ ವೇಳೆ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಿಂದ ನರಳಾಡಿದ್ದಾರೆ.
ಬಾದಾಮಿ ತಾಲೂಕಿನ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ ಹಾಗೂ ಬೀಳಗಿ ತಾಲೂಕಿನ ಗಿರುಸಾಗರ ಗ್ರಾಮದ ಹನಮಂತ ಗಾಯಾಳುಗಳು. ಸದ್ಯ ಇಬ್ಬರು ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಈ ದುರ್ಘಟನೆ ಸಂಭವಿಸಿದೆ.
ಟೈರ್ ಹಾಗೂ ರಾಜ್ಯಪಾಲರ ಪ್ರತಿಕೃತಿ ದಹನದ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗಲಿ, ಸುಟ್ಟ ಗಾಯಗಳಾಗಿವೆ.