

ಬೆಂಗಳೂರು: ಅ.28ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮದ್ಯ ಸಿಗಲ್ಲ!
ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬುಧವಾರ ಮತದಾನ ನಡೆಯುತ್ತಿದೆ. ಹಾಗಾಗಿ ಈ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್, ಎಂಎಸ್ಐಎಲ್ ಮಳಿಗೆಗಳು ಬಂದ್ ಆಗಲಿವೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ. ಇಂದು(ಸೋಮವಾರ) ಸಂಜೆ 6 ಗಂಟೆಯಿಂದ ಬುಧವಾರ ಸಂಜೆ 6ರ ವರೆಗೆ ಈ ಆದೇಶ ಅನ್ವಯವಾಗಲಿದೆ. ಒಟ್ಟು 48 ಗಂಟೆಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಾಪ್ತಿಗೆ ಕಲಬುರಗಿ, ಬಳ್ಳಾರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ ಒಳಪಟ್ಟಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿವೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಹೊಂದಿದೆ. ಈ ಜಿಲ್ಲೆಗಳಲ್ಲಿ ಎರಡು ದಿನ ಮದ್ಯ ಸಿಗಲ್ಲ.