ನಾಳೆ, ನಾಡಿದ್ದು ಕರಾವಳಿಯಲ್ಲಿ ರೆಡ್​ ಅಲರ್ಟ್​! ಮೀನುಗಾರರಿಗೆ ಎಚ್ಚರಿಕೆ

rain
Published on

ಬೆಂಗಳೂರು: ಮುಂಗಾರು ಚುರುಕಾದ ಪರಿಣಾಮ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ಸೋಮವಾರ ಕರಾವಳಿ ಭಾಗದ ಪ್ರದೇಶಗಳಲ್ಲಿ ಸರಾಸರಿ 8 ರಿಂದ 10 ಸೆಂಟಿಮೀಟರ್ ಮಳೆಯಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ಮತ್ತು 16 ರಂದು ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ವೇಳೆ 20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮುಂದಿನ 72 ಗಂಟೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದ್ದು, ಆರೆಂಜ್​ ಅರ್ಲಟ್​ ನೀಡಲಾಗಿದೆ.

ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಜೂನ್ 15, 16 ರಂದು ಯೆಲ್ಲೋ ಅರ್ಲಟ್​ ಇರಲಿದೆ. ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net