ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯ

17 mlv 1
ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಹಾಲಿನ ಟ್ಯಾಂಕ್‌ರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ.
Published on

ಮಳವಳ್ಳಿ: ಪಟ್ಟಣದ ಕನಕಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ಮಹೇಶ್ ಎಂಬುವರ ಪತ್ನಿ ರಶ್ಮಿ , ಅದೇ ಗ್ರಾಮದ ಅಭಿಲಾಷಾ ಗಾಯಾಳುಗಳಾಗಿದ್ದಾರೆ. ಇವರು ತಮ್ಮ ಸ್ಕೂಟರ್‌ನಲ್ಲಿ ಅಂಚೆದೊಡ್ಡಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದು, ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅವಘಡದಲ್ಲಿ ಸ್ಕೂಟರ್ ಚಾಲನೆ ಮಾಡುತ್ತಿದ್ದ ರಶ್ಮಿ ರವರ ತಲೆಗೆ ತೀವ್ರ ಪೆಟ್ಟಾಗಿದ್ದು, ಹಿಂಬದಿ ಕುಳಿತ್ತಿದ್ದ ಸ್ನೇಹಿತೆ ಅಭಿಲಾಷಾ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ರಶ್ಮಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ, ಮತ್ತೊಬ್ಬ ಮಹಿಳೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net