ಬೆಲ್ಟ್​ನಲ್ಲಿ ಒಂದೂವರೆ ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್​

Gold Smuggling
Published on

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಮಾನದಲ್ಲಿ ಚಿನ್ನ ಹಾಗೂ ಡ್ರಗ್ಸ್ ಕಳ್ಳ​ಸಾಗಾಣಿಕೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕಸ್ಟಮ್ಸ್​ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ಜರುಗಿಸಿದರೂ ಸಹ ಇಂತಹ ಘಟನೆಗಳು ಮರುಕಳಿಸುತ್ತಿವೆ.

ಇದೀಗ ಪ್ರಕರಣ ಒಂದರಲ್ಲಿ ವ್ಯಕ್ತಿಗಳಿಬ್ಬರು ಬೆಲ್ಟ್​ನೊಳಗೆ 1ಕೋಟಿ‌ 59 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಿಸುತಿದ್ದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Gold Smuggling

ಸಿಂಗಾಪುರದಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರ ವ್ಯಕ್ತಿಗಳು ಅನುಮಾನಸ್ಪದವಾಗಿ ಓಡಾಡುತ್ತಿದ್ದುದ್ದನ್ನು ಕಸ್ಟಮ್ಸ್​ ಅಧಿಕಾರಿಗಳು ಮೊದಲಿಗೆ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಬೆಲ್ಟ್​ನಲ್ಲಿ  ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಕಸ್ಟಮ್ಸ್​ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದು, ಬಂಧಿತರಿಂದ 1ಕೋಟಿ‌ 59 ಲಕ್ಷ ರೂಪಾಯಿ ಮೌಲ್ಯದ 2 ಕೆಜಿ 610 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net