ಕನ್ಹಯ್ಯ ಲಾಲ್​ ಭೀಕರ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ..

Murder F
Published on

ಜೈಪುರ: ರಾಜಸ್ಥಾನದ ಉದಯಪುರದಲ್ಲಿನ ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜಸ್ಥಾನದ ಅಡಿಷನಲ್ ಡೈರೆಕ್ಟರ್ ಜನರಲ್​ (ಎಟಿಎಸ್​) ಅಶೋಕ್ ರಾಥೋಡ್ ಈ ವಿಷಯ ತಿಳಿಸಿದ್ದಾರೆ.

ಕನ್ಹಯ್ಯ ಲಾಲ್ ಹತ್ಯೆಗೆ ಸಂಬಂಧಿಸಿದಂತೆ ಗುರುವಾರ ತಡರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ, ಈ ಇಬ್ಬರೂ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿರುವ ಅವರು, ಆರೋಪಿಗಳ ಕುರಿತ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಜ್​ ಅಟ್ಟರಿ ಮತ್ತು ಗೌಸ್ ಮೊಹಮ್ಮದ್ ಅವರನ್ನು ಅಜ್ಮೇರ್​ನ ಭಾರಿ ಭದ್ರತೆಯ ಜೈಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net