ದರ್ಶನ್ ವಿರುದ್ಧ ಶೀಘ್ರ ಮತ್ತೆರೆಡು ಚಾರ್ಜ್‌ಶೀಟ್

darshan new
Published on

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ರೌಡಿಗಳ ವಿರುದ್ಧ ಪೊಲೀಸರು ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಐಷರಾಮಿ ಸವಲತ್ತು ಪಡೆದ ಆರೋಪದ ಮೇಲೆ ದರ್ಶನ್ ಮತ್ತು ಇಬ್ಬರು ರೌಡಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತ ತನಿಖೆ ವೇಳೆ ಸಾಕಷ್ಟು ಪುರಾವೆ ಲಭ್ಯವಾಗಿದ್ದು, ಕಾರಾಗೃಹದ ಸಿಬ್ಬಂದಿ ಸಹಕರಿಸಿರುವುದು ಖಚಿತವಾಗಿದೆ. ಈ ಎಲ್ಲ ಮಾಹಿತಿಯನ್ನು ಕ್ರೋಡೀಕರಿಸಿ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆ ಭಾಗಶಃ ಪೂರ್ಣಗೊಳಿಸಿರುವ ಎಲೆಕ್ಟ್ರಾನಿಕ್ಸ್ ಸಿಟಿ ಉಪ ವಿಭಾಗದ ಪೊಲೀಸರು, ಆರೋಪ ಪಟ್ಟಿ ಸಲ್ಲಿಕೆಗೆ ಅಂತಿಮ ಹಂತದ ತಯಾರಿ ನಡೆಸಿದ್ದಾರೆ. ಕಾನೂನು ತಜ್ಞರಿಗೆ ಪೊಲೀಸರು ನೀಡಿದ್ದು, ಕಾನೂನುತಜ್ಞರ ಅಭಿಪ್ರಾಯ ಪಡೆದ ಬಳಿಕ ಕೋರ್ಟ್‌ಗೆ ಸಲ್ಲಿಸಲಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸೇರಿದ್ದ ದರ್ಶನ್, ಆ ಜೈಲಿನಲ್ಲಿ ಅಕ್ರಮವಾಗಿ ವಿಶೇಷ ಸೌಲಭ್ಯ ಪಡೆದಿದ್ದರು. ಜೈಲಿನಲ್ಲಿ ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಶ್ರೀನಿವಾಸ ಅಲಿಯಾಸ್ ಕುಳ್ಳ ಸೀನ ಜತೆ ಸಿಗರೇಟ್ ಕೈಯಲ್ಲಿ ಹಿಡಿದು ಚಹಾ ಮಗ್ ಜತೆ ಕುರ್ಚಿಯಲ್ಲಿ ದರ್ಶನ್ ಕುಳಿತ ಪೋಟೋ ಬಹಿರಂಗವಾಗಿತ್ತು. ರೌಡಿ ಧರ್ಮನ ಸಹಚರನ ಜತೆ ಮೊಬೈಲ್‌ನಲ್ಲಿ ಮಾತನಾಡಿ ವಿಡಿಯೋ ತುಣುಕು ಬಯಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net