ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ; 4.5 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ| Drug-seiz

FotoJet
Published on

ಬೆಂಗಳೂರು: ರಾಜ್ಯ ರಾಜಧಾನಿಯ ರಾಜನಕುಂಟೆ ಪ್ರದೇಶದಲ್ಲಿ ಬೃಹತ್ ಮಾದಕವಸ್ತು ಜಾಲವನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದು, 4.5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಂಡಿಎಂಎ ಮತ್ತು ಇತರ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಡೆಸಲಾದ ಈ ಕಾರ್ಯಾಚರಣೆಯಲ್ಲಿ, ಬಾಡಿಗೆ ಮನೆಯಿಂದ ಕಾರ್ಯನಿರ್ವಹಿಸುತ್ತಿದ್ದ ಜಾಲ ಪತ್ತೆಯಾಗಿದೆ.

ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಪತ್ತೆಹಚ್ಚಲಾಗಿದೆ. ಇವರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಆಗಮಿಸಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆಗೆ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್​ಪೋರ್ಟ್​ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು ಎನ್ನಲಾಗಿದೆ. ಬಳಿಕ ಮನೆಯಲ್ಲಿಯೇ ಡ್ರಗ್ ಶೇಖರಿಸಿಕೊಟ್ಟು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು ಎಂದು ಹೇಳಲಾಗಿದೆ.

(ಏಜೆನ್ಸೀಸ್)

ಇನ್ನೂ ಪೊಲೀಸರ ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್​ಗಳು, ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಹೊಸಪಡಿಸಿಕೊಳ್ಳಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ‌.

ಆರೋಪಿಗಳು ಡ್ರಗ್ ಮಾರಾಟ ಮಾಡಲು ರೆಡಿಮೇಡ್ ಬಟ್ಟೆಗಳು, ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್, ಪ್ಯಾಂಟ್​ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಮಾರಾಟ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net