3 ಲಕ್ಷ ರೂ. ಮೌಲ್ಯದ ನಿಷೇಧಿತ ಗುಟ್ಕಾ-ಪಾನ್​​ ಮಸಾಲ ಸಂಗ್ರಹ, ಇಬ್ಬರು ಆರೋಪಿಗಳ ಬಂಧನ

tn
Published on

ತಮಿಳುನಾಡು: ಮೂರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಮತ್ತು ಪಾನ್​ ಮಸಾಲವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಗಳಾದ ವೆಂಕಟೇಶನ್ ಮತ್ತು ದೊರೈಮುರುಗನ್ ಸಹೋದರರಾಗಿದ್ದು, ವೆಲ್ಲೂರಿನ ಪೋನೈ ಎಂಬಲ್ಲಿ ದಿನಸಿ ಅಂಗಡಿಯ ಮಾಲೀಕರಾಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

ಪೊಲೀಸರು ಆರೋಪಿಗಳ ದಿನಸಿ ಅಂಗಡಿ ಮೇಲೆ ದಾಳಿ ಮಾಡಿದಾಗ ಗೋದಾಮಿನಲ್ಲಿ ಅಪಾರ ಪ್ರಮಾಣದ ನಿಷೇಧಿತ ಗುಟ್ಕಾ-ಪಾನ್ ಮಸಾಲ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net