ಮನೆಯ ಗೋಡೆ ಕುಸಿದು ಬಿದ್ದು ಇಬ್ಬರ ದುರ್ಮರಣ; ಹಳೇ ಮನೆ ಗೋಡೆ ತೆರವುಗೊಳಿಸುವಾಗ ಅವಘಡ..

Pub crime
Published on

ಉತ್ತರಕನ್ನಡ: ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಗಂಭೀರ ಗಾಯಗೊಂಡು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಈ ದುರಂತ ಸಂಭವಿಸಿದ್ದು, ಬಾವಿಕೇರಿ ನಿವಾಸಿಗರಾದ ಮಧುಕರ ಸುಬ್ರಾಯ ನಾಯಕ (58), ಶಾಂತಾರಾಮ ನಾರಾಯಣ ನಾಯಕ (58) ಎಂಬವರು ಸಾವಿಗೀಡಾಗಿದ್ದಾರೆ. ಮಧುಕರ ಅವರ ಹಳೆಯ ಮನೆಯ ಗೋಡೆ ತೆರವುಗೊಳಿಸುವಾಗ ಈ ಅವಘಡ ಸಂಭವಿಸಿದೆ.

ಹಳೇಮನೆಯ ಗೋಡೆಯ ಕುಸಿದು ಮಧುಕರ ಮತ್ತು ಶಾಂತಾರಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಇಬ್ಬರೂ ಸಾವಿಗೀಡಾದರು. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net