ಕೆಎಸ್​ಆರ್​​ಟಿಸಿ ಬಸ್​, ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರೂ ಸಾವು..

Bus Accident
Published on

ಬಾಗಲಕೋಟೆ: ಕೆಎಸ್ಆರ್​ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ಬೈಕ್ ಸವಾರರಾದ ಶ್ರೀನಿವಾಸ ಹಂಸನೂರು (32), ಈಶ್ವರ ಮಾಚಕನೂರು (54) ಸಾವಿಗೀಡಾದವರು. ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್​​ನಲ್ಲಿ ಈ ಅಪಘಾತ ಸಂಭವಿಸಿದೆ. ಕೆಎಸ್​ಆರ್​​ಟಿಸಿ ಬಸ್​ ಮುದ್ದೇಬಿಹಾಳದಿಂದ‌ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದು, ಬೈಕ್ ಸವಾರರು ಬಾಗಲಕೋಟೆಯಿಂದ ಸೀಗಿಕೇರಿ ಕಡೆಗೆ ಸಾಗುತ್ತಿದ್ದರು.

ಅಪಘಾತದಲ್ಲಿ ಶ್ರೀನಿವಾಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ ಈಶ್ವರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net