

ಕೊಪ್ಪಳ: ದೇವರ ದರ್ಶನ ಪಡೆದು ಬರುತ್ತಿದ್ದ ದಾರಿಯಲ್ಲಿ ಸಾವು ಎದುರಾಗಿ ಇಬ್ಬರು ದುರ್ಮರಣಕ್ಕೀಡಾದ ಪ್ರಸಂಗ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೊಪ್ಪಳ ತಾಲೂಕಿನ ಉಪಲಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದ ಶರಣಪ್ಪ, ಕಾಳಪ್ಪ ಎಂಬವರು ಸಾವಿಗೀಡಾದ ಬೈಕ್ ಸವಾರರು.
ಹುಲಗಿಯ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದ ಇವರು, ಅಲ್ಲಿ ದೇವರ ದರ್ಶನ ಪಡೆದು ಮರಳುತ್ತಿದ್ದಾಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಸರ್ಕಾರಿ ಬಸ್ ಮತ್ತು ಇವರ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದರು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.