ನಂಬರ್ ಪ್ಲೆಟ್ ಕಾಣದಂತೆ ಸ್ಟಿಕ್ಕರ್ ಅಂಟಿಸಿದ್ದ ಇಬ್ಬರ ಸೆರೆ

arrested
Published on

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನೋಂದಣಿ ಸಂಖ್ಯೆ ಕಾಣದಂತೆ ಸ್ಟಿಕ್ಕರ್ ಅಂಟಿಸಿಕೊಂಡು ಓಡಾಡುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರನ್ನು ನಗರ ಸಂಚಾರ ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿಯ ನವೀನ್ ಕುಮಾರ್(೨೩) ಮತ್ತು ಗುಂಜೂರಿನ ಮೋಹನ್(೧೯) ಬಂಧಿತ ಸವಾರರು.
ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣಪಾಳ್ಯ ಮುಖ್ಯರಸ್ತೆಯಲ್ಲಿ ಸೋಮವಾರ ಬೆಳಗ್ಗೆ ದ್ವಿಚಕ್ರ ವಾಹನ ಸವಾರನೊಬ್ಬ ನೋಂದಣಿ ಸಂಖ್ಯೆ ಕಾಣದಂತೆ ಮರೆಮಾಚಿಕೊಂಡು ಓಡಾಡುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ನಗರ ಸಂಚಾರ ಪೊಲೀಸರ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದರು. ಇದರ ಬೆನ್ನಲ್ಲೇ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಸವಾರ ನವೀನ್ ಕುಮಾರ್‌ನನ್ನು ಬಂಧಿಸಿ, ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಸಾರ್ವಜನಿಕರು ಟ್ವಿಟರ್ ಖಾತೆಯಲ್ಲಿ ನೀಡಿದ ದೂರಿನ ಮೇರೆಗೆ ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಗುಂಜೂರು ಮುಖ್ಯರಸ್ತೆಯಲ್ಲಿ ನೋಂದಣಿ ಸಂಖ್ಯೆ ಕಾಣದಂತೆ ಸ್ಟಿಕ್ಕರ್ ಅಂಟಿಸಿಕೊಂಡು ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರ ಮೋಹನ್‌ನನ್ನು ಪತೆ ್ತ ಹಚ್ಚಿ ಬಂಧಿಸಿ, ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net