ಕರ್ತವ್ಯನಿರತ ಪೊಲೀಸರ ಮೇಲೆ ಹರಿದ ಲಾರಿ: ಡ್ರೈವರ್​, ಕ್ಲೀನರ್​ ಸ್ಥಳದಿಂದ ಪರಾರಿ..!

Lorry Accident
Published on

ವಿಜಯವಾಡ: ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

ಮುಖ್ಯ ಪೊಲೀಸ್​ ಪೇದೆ ಸತ್ಯನಾರಾಯಣ ಮತ್ತು ಹೋಮ್​ ಗಾರ್ಡ್​ ಎನ್​. ಎಸ್​. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು.

ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್​ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕಾಕಿನಾಡ ಡಿಎಸ್​ಪಿ ಭೀಮಾರಾವ್​ ಮತ್ತು ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net