ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್​ ಕೊಟ್ಟ ತುಮಕೂರು ಎಸ್ಪಿ

TMK Police
Published on

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇಲೆ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.

ನೆಟ್ಟಿಗರ ಆಕ್ರೋಶ

ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ, ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ಲಾರಿಯಿಂದ 200, 300 ರೂಪಾಯಿ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

ಹಣ ವಸೂಲಿ ಸಾಬೀತು

ಹಣ ವಸೂಲಿ ಪ್ರಕರಣ ತಮ್ಮ ಗಮನಕ್ಕೆ ಬರುತ್ತಿದ್ದಂತೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್​ಪೆಕ್ಟರ್​ಗೆ ತುಮಕೂರು ಎಸ್ಪಿ ಸೂಚನೆ ನೀಡಿದ್ದರು. ವರದಿಯಲ್ಲಿ ಪೊಲೀಸರು ಹಣ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಎಎಸ್​ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net