ಮತ್ತೆ ಬಲಿ ಪಡೆಯಿತು ಬಿಬಿಎಂಪಿ ಕಸದ ಲಾರಿ; ಬೈಕ್​ಗೆ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು..

BBMP
ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಮಾಯಿಸಿರುವ ಜನರು.
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಕಸದ ವಾಹನಕ್ಕೆ ಜನರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂಥ ವಾಹನಗಳಿಗೆ ಹಲವರು ಬಲಿಯಾಗಿದ್ದು, ಇಂದು ಬಿಬಿಎಂಪಿ ಕಸದ ಲಾರಿಯೊಂದು ಇಬ್ಬರ ಸಾವಿಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಸದ ಲಾರಿ ಬೈಕ್​ಗೆ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಲಾರಿ ತ್ಯಾಜ್ಯ ಸುರಿಯಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಈ ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಲು ಯತ್ನಿಸಿದ್ದ. ಆದರೆ ಸಾರ್ವಜನಿಕರು ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗೆ ಅಂದರೆ ಎರಡು ತಿಂಗಳ ಹಿಂದೆಯೂ ಕಸದ ಲಾರಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದ. ಹೀಗಾಗಿ ಇಂದು ಮತ್ತೆ ಕಸದ ಲಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net