ತುಂಗಾ ನದಿಯಲ್ಲಿ ಮುಳುಗಿ ಶೃಂಗೇರಿಯ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ದುರಂತ ಸಾವು

CKM Student
Published on

ಚಿಕ್ಕಮಗಳೂರು: ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ನಡೆದಿದೆ.

ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ ಮೃತ ದುರ್ದೈವಿಗಳು. ಇಬ್ಬರು 14 ವಿಧ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು. ಈ ವೇಳೆ ರಕ್ಷಿತ್​ ನೀರಿನಲ್ಲಿ ಸಿಲುಕಿಕೊಂಡಿದ್ದ. ಆತನ ರಕ್ಷಣೆಗೆಂದು ಪ್ರಜ್ವಲ್​ ತೆರಳಿದಾಗ ದುರ್ಘಟನೆ ಸಂಭವಿಸಿದೆ.

ಇಬ್ಬರು ಶೃಂಗೇರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರ ಸಾವಿನ ಸುದ್ದಿ ತಿಳಿದ ಕೂಡಲೇ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net