ಪುಲ್ವಾಮದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಶಸ್ತ್ರಾಸ್ತ್ರ ವಶ

jm pic
Published on

ಜಮ್ಮು-ಕಾಶ್ಮೀರ: ಭಯೋತ್ಪಾದಕರು ಮತ್ತು ರಕ್ಷಣಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿರುವ ಘಟನೆ ಪುಲ್ವಾಮದಲ್ಲಿ ನಡೆದಿದೆ.

ಹಾಂಗಲ್​​ಮಾರ್ಗ್​ನ ದಾವಿಗಾಂ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಕರಿಗೆ ಶರಣಾಗುವಂತೆ ರಕ್ಷಣಾ ಪಡೆ ಹೇಳಿದರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಯಾಗಿ ಇಂದು ಬೆಳಗ್ಗೆ ನಡೆದ ಆಪರೇಷನ್ ಹಾಂಗಲ್​​ಮಾರ್ಗ್​ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಹತ್ಯೆಯಾಗಿರುವ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರ ಬಳಿಯಿದ್ದ ಒಂದು ಎಕೆ 47 ಮತ್ತು ಎಂ4 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net