ಭಾರತದೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಉಗ್ರರಿಬ್ಬರನ್ನು ಸದೆಬಡಿದ ಸೇನೆ

Army (3)
Published on

ನವದೆಹಲಿ: ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸಂಹಾರ ಮಾಡಲಾಗಿದೆ. ಅರ್ಥಾತ್, ಭಾರತೀಯ ಸೇನೆಯ ಯೋಧರು ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸದೆ ಬಡಿಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇವರು ಒಳನುಸುಳಲು ಯತ್ನಿಸುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ಆ ಪೈಕಿ ಒಬ್ಬ ಭಯೋತ್ಪಾದಕನ ಶವ ವಶಪಡಿಸಿಕೊಳ್ಳಲಾಗಿದ್ದು, ಹೊಡೆದುರುಳಿಸಲಾದ ಇನ್ನೊಬ್ಬ ಉಗ್ರನ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ.

ಭಾರತೀಯ ಸೇನೆ, ಫೂಂಛ್ ಬ್ರಿಗೇಡ್ ಮತ್ತು ಮಂಡಿ ಪೊಲೀಸ್ ಹಾಗೂ ಸ್ಪೆಷಲ್ ಆಪರೇಷನ್ ಗ್ರೂಪ್​ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ ಎಂದು ಸೇನೆಯ ಮಾಧ್ಯಮ ಪ್ರತಿನಿಧಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net