ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Published on

ಅರಕಲಗೂಡು: ತಾಲೂಕಿನ ಕೊಣನೂರಿನಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕೊಣನೂರಿನ ನಿವಾಸಿಗಳಾದ ಮಂಗಳಮ್ಮ (48), ರಾಧಮ್ಮ (62) ಮೃತರು. ಅತ್ತೆ ಕರಿಯಮ್ಮ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಮೃತರ ತಿಥಿ ಕಾರ್ಯಕ್ಕಾಗಿ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಸ್ಫೋಟಗೊಂಡು ಸೊಸೆಯರಾದ ಮಂಗಳಮ್ಮ, ರಾಧಮ್ಮ ಹಾಗೂ ಸಂಬಂಧಿಕರಾದ ಮೀನಾಕ್ಷಮ್ಮ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಘಟನಾ ಸ್ಥಳಕ್ಕೆ ಕೊಣನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು. ಗಾಯಾಳು ಮಂಗಳಮ್ಮ ಮಂಗಳವಾರ ಮೃತಪಟ್ಟರು. ಬುಧವಾರ ರಾಧಮ್ಮ ಕೊನೆಯುಸಿರೆಳೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net