

ಬೆಂಗಳೂರು: ಕಾರು-ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದ ಒಂದೇ ಕುಟುಂಬದ ನಾಲ್ವರ ಪೈಕಿ ಇಬ್ಬರು ಗಾಯಗೊಂಡಿರುವ ಪ್ರಕರಣ ರಾಜಾನುಕುಂಟೆ ರಸ್ತೆಯಲ್ಲಿ ನಡೆದಿದೆ.
ದಂಪತಿಗೆ ಗಾಯವಾಗಿದೆ. ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಆ.೨೬ ಸಂಜೆ ೪ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಮಕ್ಕಳು ಹಾಗೂ ದಂಪತಿ ಬೈಕ್‌ನಲ್ಲಿ ಹೊರಟಿದ್ದರು. ಬೈಕ್ ಸವಾರ ರಾಜಾನುಕುಂಟೆ ರಸ್ತೆ ಮಧ್ಯದ ಟ್ರ್ಯಾಕ್‌ನಿಂದ ಬಲಗಡೆಗೆ ತಿರುವು ತೆಗೆದುಕೊಂಡಾಗ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕೂಡಲೇ ರಸ್ತೆ ಮೇಲೆ ಬಿದ್ದ ಮಕ್ಕಳನ್ನು ಇತರ ಸವಾರರು ರಕ್ಷಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಮತ್ತು ಪತಿಗೆ ಗಂಭೀರ ಗಾಯವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.