

ಮುಂಬೈ: ವಿಶ್ವಾಸಮತ ಸಾಬೀತುಪಡಿಸುವ ಪ್ರಶ್ನೆ ಉದ್ಭವಿಸಿದ ಬೆನ್ನಿಗೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಉದ್ಧವ್ ಠಾಕ್ರೆ, ಸದ್ಯ ಶ್ವಾಸ ಕಟ್ಟಿದ ಪರಿಸ್ಥಿತಿಯಲ್ಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಗ್ಗಂಟಾಗಿರುವ ಮಹಾರಾಷ್ಟ್ರ ರಾಜಕಾರಣ ಮಹಾ ಕಗ್ಗಂಟಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಇಂದು ಸೂಚನೆ ನೀಡಿದೆ. ಸುಪ್ರೀಂ ಸೂಚನೆ ಹೊರಬಿದ್ದ ಕೆಲವೇ ನಿಮಿಷಗಳಲ್ಲಿ ಫೇಸ್ಬುಕ್ ಲೈವ್ ಬಂದ ಠಾಕ್ರೆ, ತಾವು ರಾಜೀನಾಮೆ ನೀಡಲಿರುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸಮತ ಯಾಚನೆಗೆ ಸೂಚಿಸಿ ಮಹಾರಾಷ್ಟ್ರ ರಾಜ್ಯಪಾಲರು ನಿರ್ದೇಶನ ನೀಡಿದ್ದನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯಸ್ಥ ಸುನೀಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ಹೀಗಾಗಿ ನಾಳೆಯ ಅಧಿವೇಶನದಲ್ಲಿ ಠಾಕ್ರೆ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ.