ಉಡುಪಿ ಪ್ರಕರಣ ಎಸ್‌ಐಟಿ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ

Kota Srinivas 10Oct19
Published on

ಬೆಂಗಳೂರು:
ಉಡುಪಿಯಲ್ಲಿ ನೇತ್ರಜ್ಯೋತಿ ಅರೆ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಬಗ್ಗೆ ಎಸ್‌ಐಟಿ ತನಿಖೆಗೆ ಆಗ್ರಹಿಸಿ ಬಿಜೆಪಿ ಮನವಿ ಮಾಡಿದೆ.
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಎಸ್‌ಐಟಿ ತನಿಖೆಗಾಗಿ ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಒತ್ತಾಯಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ, ಗಂಭೀರ ಘಟನೆಯನ್ನು ಡಿಎಸ್‌ಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುತ್ತಿರುವುದರಿಂದ ಸತ್ಯ ಹೊರಗೆ ಬರುವುದಿಲ್ಲ. ಆದ್ದರಿಂದ ಎಸ್‌ಐಟಿ ತನಿಖೆಯೇ ಆಗಬೇಕು ಎಂದು ಒತ್ತಾಯಿಸಿದರು.
ಗೃಹ ಸಚಿವರು ಇದೊಂದು ತಮಾಷೆಯ ವಿಷಯ ಎಂಬಂತಿದ್ದಾರೆ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸರಕಾರವೂ ಮೀನಮೇಷ ಎಣಿಸುತ್ತಿರುವುದರಿಂದ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದರು.
ವಿಡಿಯೋ ಚಿತ್ರೀಕರಣ ಮಾಡಿದ ವಿದ್ಯಾರ್ಥಿನಿಯರಿಗೆ ಜಾಮೀನು ಕೊಟ್ಟಿದ್ದು, ಅವರಿಗೆ ಪಿಎ್ಐ ಸಂಪರ್ಕ ಇರುವ ಸಾಧ್ಯತೆ ಕುರಿತು ಗಮನ ಸೆಳೆಯಲಾಗಿದೆ. ರಾಜ್ಯಪಾಲರು ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಶಾಸಕರಾದ ಯಶಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯಕ್ ಅವರು ನಿಯೋಗದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net