VIDE0|ಉಡುಪಿ ರೈಲು ನಿಲ್ದಾಣದಲ್ಲಿ ಕೇರಳದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿರುವುದಾಗಿ ಸ್ಪಷ್ಟಪಡಿಸಿದ ಗೃಹ ಸಚಿವರು

basavaraj bommai
Published on

ಚಿಕ್ಕಮಗಳೂರು: ಉಡುಪಿ ರೈಲು ನಿಲ್ದಾಣದಲ್ಲಿ ಕೇರಳ ಮೂಲದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಸಚಿವರು ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಇಬ್ಬರು ಉಗ್ರರು ಆಗಮಿಸಿದ್ದರು. ಗುಪ್ತಚರ ದಳ ಮಾಹಿತಿ ಆಧಾರದ ಮೇಲೆ ಇವರನ್ನು ಉಡುಪಿ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಹಿಂದು ಸಂಘಟನೆಗಳ ಮುಖಂಡರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿ ಸದಾಖತ್ ಉಲ್ಲಾ (35) ಹಾಗೂ ಅಲ್ ಉಮರ್ ಸಂಘಟನೆಯ ಮೆಹಬೂಬ್ ಪಾಷಾ ಎಂಬುವವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.

ಪೊಲೀಸರು ಗುಂಡ್ಲುಪೇಟೆಯ ಮದರಸಕ್ಕೆ ನೋಟಿಸ್​ ಜಾರಿ ಮಾಡಿದ್ದಾರೆ. ಅಲ್ಲದೆ ಮದರಸವನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net