ಯುಜಿನೀಟ್/ಸಿಇಟಿ: ಪ್ರವೇಶಕ್ಕೆ ಮತ್ತೊಂದು ಅವಕಾಶ

NEET (1)
Published on

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಯ್ಕೆಗಳನ್ನು ದಾಖಲಿಸಲು ಶುಲ್ಕ ಕಟ್ಟುವ ಮತ್ತು ಕಾಲೇಜಿಗೆ ಸೇರಲು ನಿಗದಿಪಡಿಸಿದ್ದ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.

ಕಾಲೇಜು/ಕೋರ್ಸ್ ಗಳಿಗೆ ತಮ್ಮ ಆಯ್ಕೆಯನ್ನು ನೋಂದಾಯಿಸಲು ಆ.24ರ ಮಧ್ಯಾಹ್ನ 12ರ ವರೆಗೆ; ಶುಲ್ಕ ಪಾವತಿಸಲು ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ; ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ರಾತ್ರಿ 11.59ರ ವರೆಗೆ ಅವಕಾಶ ನೀಡಲಾಗಿದೆ. ಬಳಿಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವರದಿ ಮಾಡಿಕೊಳ್ಳಲು ಆ.25 ಕೊನೇ ದಿನವಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net