

ಲಖನೌ: ಇತ್ತೀಚಿನ ದಿನಗಳಲ್ಲಿ ಕ್ಷುಲಕ ಕಾರಣಗಳಿಗೆ (Silly Matter) ಜನರು ಹೊಡೆದಾಡಿಕೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದ ಸುದ್ದಿಗಳು ರಾಷ್ಟ್ರವ್ಯಾಪಿ ಸದ್ದು ಮಾಡುತ್ತವೆ. ಈ ವಿಚಾರಕ್ಕೆ ಬರುವುದಾದರೆ ಉತ್ತರಪ್ರದೇಶ (Uttar Pradesh)ಹೆಚ್ಚು ಸದ್ದು ಮಾಡುತ್ತದೆ ಎಂದರೆ ತಪ್ಪಾಗಲಾರದು. ಇದೀಗ ಉತ್ತರಪ್ರದೇಶದ ಬಾಗ್ಪತ್ ಜಿಲ್ಲೆಯ ದೋಘಾಟ್ನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್ (Video Viral) ಆಗಿದೆ.
ಸುದ್ದಿ ಮೂಲಗಳಿಂದ ಕೇಳಿ ಬಂದಿರುವ ಮಾಹಿತಿ ಪ್ರಕಾರ ಹಾಡು ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಮಹಿಳೆಯರ (Ladies) ನಡುವೆ ಜಗಳವಾಗಿದ್ದು, ಕ್ಷಣಾರ್ಧದಲ್ಲೇ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದೊಣ್ಣೆ (Sticks) ಹಿಡಿದು ಮಹಿಳೆಯರು ಹೊಡೆದಾಡಲು ಶುರು ಮಾಡಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಸುಮಾರು 8-10 ಮಹಿಳೆಯರು (Ladies) ಪರಸ್ಪರ ಹೊಡೆದಾಡಿಕೊಂಡಿದ್ದು, ಬಿಡಿಸಲು ಹೋದವರಿಗೂ ಗೂಸಾ ಕೊಟ್ಟಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಹೊಡೆದಾಟದಲ್ಲಿದ್ದ ಬಹುತೇಕ ಮಹಿಳೆಯರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈರಲ್ ವಿಡಿಯೋ (Viral Video) ಆಧರಿಸಿ ತನಿಖೆ ನಡೆಸಲಾಗುತ್ತಿದ್ದು, ಗಾಯಗೊಂಡವರ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.