

ಬೆಂಗಳೂರು: ವಿವಿಧ ಕಾರಣಗಳಿಂದ ವೈದ್ಯಕೀಯ ಕೋರ್ಸ್‌ಗಳಿಗೆ ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೆ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಸೆ.25ರಿಂದ 29ರವರೆಗೆ ಅವಕಾಶ ನೀಡಲಾಗುವುದು. ಅಲ್ಲದೆ, ಸಿಇಟಿಗೆ ಅರ್ಜಿ ಸಲ್ಲಿಸಿ, ಕೆಇಎ ಪೋರ್ಟಲ್‌ನಲ್ಲಿ ಯುಜಿ ನೀಟ್ ರೋಲ್ ನಂಬರ್ ನಮೂದಿಸುವುದಕ್ಕೂ ಸೆ.29ರಿಂದ ಅಕ್ಟೋಬರ್ 3ರವರೆಗೆ ಅವಕಾಶ ನೀಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಎಲ್ಲ ಅಭ್ಯರ್ಥಿಗಳು ಹೊಸದಾಗಿಯೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಲಭ್ಯ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಆಪ್ಷನ್ಸ್ ದಾಖಲಿಸಲು ಇದು ಅನುಕೂಲವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಇಂದು ಲತಾಂಶ ಪ್ರಕಟ:
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್‌ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ಆ ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಅಂತಿಮ ಸುತ್ತಿನ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಇಎ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಕಾಲೇಜಿಗೆ ಸೇರಿದ್ದ ಅಭ್ಯರ್ಥಿಗಳಿಗೆ ಎಂಸಿಸಿ ಯಲ್ಲಿ ಸೀಟು ಸಿಕ್ಕಿದ್ದರೂ ರದ್ದುಪಡಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆ ಸೀಟುಗಳನ್ನು ಕೂಡ ಇದೇ ಸುತ್ತಿಗೆ ಪರಿಗಣಿಸಲಾಗುವುದು ಎಂದರು.