ಉಜ್ಜಯಿನಿ ಶ್ರೀಗಳಿಂದ ಆಷಾಢ ಮಾಸದ ಇಷ್ಟಲಿಂಗ ಪೂಜೆ ಜು. 19ರಿಂದ

je721538035802367-abc
Published on

ರಾಣೆಬೆನ್ನೂರ: ಇಲ್ಲಿನ ಮ್ಯತ್ಯುಂಜಯ ನಗರ ಚನ್ನೇಶ್ವರ ಮಠದ ಶ್ರೀ ಜಗದ್ಗುರು ವಾಗೀಶ ಪಂಡಿತಾರಾಧ್ಯ ಸಮುದಾಯ ಭವನದಲ್ಲಿ ಜು. 19ರಿಂದ 21ರ ವರೆಗೆ ಗುರುಪುರ್ಣಿಮೆ ಅಂಗವಾಗಿ ಉಜ್ಜಯನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿ ಕೇಂದ್ರ ಸ್ವಾಮೀಜಿ ಅವರಿಂದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಮತ್ತು ಜನಜಾಗೃತಿ ಸಮಾರಂಭ ಆಯೋಜಿಸಲಾಗಿದೆ.
ಜು. 19ರಂದು ಸಂಜೆ 4 ಗಂಟೆಗೆ ಉಜ್ಜಯನಿ ಶ್ರೀಗಳನ್ನು ಮೃತ್ಯುಂಜಯ ಮಠದಿಂದ ಚನ್ನೇಶ್ವರ ಮಠದ ವರೆಗೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಗುವುದು. ಸಂಜೆ 6ಕ್ಕೆ ಧರ್ಮ ಸಭೆ ಜರುಗಲಿದ್ದು ಉಜ್ಜಯನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನೇತೃತ್ವ ವಹಿಸುವರು.
ಪುರವರ್ಗ ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯರು, ಸ್ಥಳೀಯ ಶನೈಶ್ವರ ಮಠ ಶಿವಯೋಗಿ ಶಿವಾಚಾರ್ಯರು, ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಸ್ಥಳೀಯ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಮ್ಮುಖ ವಹಿಸುವರು.
ಜು. 20ರಂದು ಬೆಳಗ್ಗೆ 8ಕ್ಕೆ ಉಜ್ಜಯನಿ ಶ್ರೀಗಳಿಂದ ಇಷ್ಟಲಿಂಗ ಮಹಾ ಪೂಜೆ ನೆರವೇರುವುದು. ಸಂಜೆ 6ಕ್ಕೆ ಧರ್ಮಸಭೆ ಜರುಗಲಿದ್ದು, ದಿಂಡದಹಳ್ಳಿ ಮಠದ ಪಶುಪತಿ ಶಿವಾನಂದ ಶಿವಾಚಾರ್ಯರು, ಕೊಣಂದೂರು ಮತ್ತು ಪುರದ ಅಭಿನವ ಸಿದ್ದವೀರ ಶಿವಾಚಾರ್ಯರು, ನೆಗಳೂರು ಸಂಸ್ಥಾನಮಠ ಗುರುಶಾಂತೇಶ್ವರ ಶಿವಾಚಾರ್ಯರು, ಲಿಂಗದಹಳ್ಳಿ ಹಿರೇಮಠದ ವೀರಭದ್ರ ಶಿವಾಚಾರ್ಯರು, ಮಣಕೂರು ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಸಮ್ಮುಖ ವಹಿಸುವರು. ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮತ್ತಿತರರು ಪಾಲ್ಗೊಳ್ಳುವರು.
ಜು. 21ರಂದು ಬೆಳಗ್ಗೆ 8ಕ್ಕೆ ಉಜ್ಜಯನಿ ಶ್ರೀಗಳಿಂದ ಇಷ್ಟಲಿಂಗ ಮಹಾಪೂಜೆ ನೆರವೇರುವುದು. ಬೆಳಗ್ಗೆ 11ಕ್ಕೆ ಧರ್ಮಸಭೆ ಜರುಗಲಿದ್ದು ಉಜ್ಜಯನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಬಸವರಾಜ ಬೊಮ್ಮಾಯಿ, ಪ್ರಮುಖರಾದ ಸುನಂದಮ್ಮ ತಿಳವಳ್ಳಿ, ಸುಮಂಗಲ ಪಾಟೀಲ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net